ರಾಜ್ಯದಲ್ಲಿ ಒಟ್ಟು 35 ಮಹಿಳಾ ಪೊಲೀಸ್ ಠಾಣೆಗಳು ಮಂಜೂರಾಗಿವೆ. ಮಹಿಳಾ ಪೊಲೀಸ್ ಠಾಣೆಗೆ ಒಟ್ಟು 1461 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿದರು.
ಮಹಿಳಾ ಪೊಲೀಸ್ ಠಾಣೆಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಅನುದಾನ ನಿಗದಿಯಾಗಿಲ್ಲ. ಜಿಲ್ಲಾ ಪೊಲೀಸ್ ನಿಗದಿಪಡಿಸಿದ ಲೆಕ್ಕ ಶೀರ್ಷಿಕೆಯಡಿ 158462.00 ಲಕ್ಷ ರೂ ಹಾಗೂ ರಾಜ್ಯ ಕೇಂದ್ರ ಸ್ಥಾನ ಪೊಲೀಸ್ (ಪೊಲೀಸ್ ಆಯುಕ್ತರ) ನಿಗದಿನ ಪಡಿಸಿದ ಲೆಕ್ಕ ಶೀರ್ಷಿಕೆಯಡಿ 89325.00 ಲಕ್ಷ ರೂ. ವೆಚ್ಚವನ್ನು ಮಹಿಳಾ ಪೊಲೀಸ್ ಠಾಣೆಗಳ ನಿರ್ವಹಣೆಗೆ ಭರಿಸಲಾಗುತ್ತಿದೆ ಎಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ರಾಜ್ಯದಲ್ಲಿ 6887 ನಿವೇಶನಗಳ ಹಂಚಿಕೆ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ರಾಜ್ಯದಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಒಟ್ಟು 6887 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್ ರೋಷನ್ ಬೇಗ್ ತಿಳಿಸಿದರು.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಿವೇಶನ ಹಂಚಿಕೆ) ನಿಯಮಗಳು 1991 ರನ್ವಯ ಹಾಗೂ ಮೂಲೆ ನಿವೇಶನಗಳನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ವಾಣಿಜ್ಯ ಮತ್ತು ಮೂಲೆ ನಿವೇಶನಗಳ ಹಂಚಿಕೆ) ನಿಯಮಗಳು 1991 ರನ್ವಯ ಹಂಚಿಕೆ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.