Publish Date: Sun, 16 Jan 2022 (15:03 IST)
Updated Date: Sun, 16 Jan 2022 (15:39 IST)
ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯದ ಸ್ತಬ್ಧ ಚಿತ್ರ ಆಯ್ಕೆ ಆಗಿರುವುದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ'ಎಂದು ಹೇಳಿದರು.
ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದು ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
geetha
Publish Date: Sun, 16 Jan 2022 (15:03 IST)
Updated Date: Sun, 16 Jan 2022 (15:39 IST)