Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಇಂದು ಅನುತ್ತೀರ್ಣರಾದವರಿಗೆ ಮತ್ತು ಸುಧಾರಣೆ ಮಾಡಲು ಎರಡನೇ ಬಾರಿಗೆ ಪರೀಕ್ಷೆ ಬರೆದವರಿಗೆ ಇಂದು ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಪರೀಕ್ಷೆ ಬರೆದವರಿಗೆ ಫಲಿತಾಂಶ ಯಾವಾಗ ಎಂಬ ಗೊಂದಲಕ್ಕೆ ಈ ಮೂಲಕ ಉತ್ತರ ಸಿಕ್ಕಂತಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈಗಾಗಲೇ ಪ್ರಕಟವಾಗಿತ್ತು. ಆದರೆ ಅನುತ್ತೀರ್ಣರಾದವರಿಗೆ ಮತ್ತು ಕೆಲವೊಂದು ವಿಷಯಗಳಲ್ಲಿ ಸುಧಾರಿತ ಅಂಕ ಬೇಕೆಂಬ ಕಾರಣಕ್ಕೆ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಏಪ್ರಿಲ್ 29 ರಿಂದ ಮೇ 16 ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ಆ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.
ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅಂಕ ಸುಧಾರಣೆಗೆ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ. ಇಂದು ಅಪರಾಹ್ನ 3 ಗಂಟೆಗೆ ಎಂಬ https://karresults.nic.in ವೆಬ್ ಸೈಟ್ ನಲ್ಲಿ ನಿಮ್ಮ ನೋಂದಣಿ ಸಂಖ್ಯೆ, ಯಾವ ವಿಭಾಗ, ಎಂದು ಆಯ್ಕೆ ಮಾಡಿಕೊಂಡು ಫಲಿತಾಂಶ ವೀಕ್ಷಿಸಬಹುದು.