Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇನ್ಮುಂದೆ ಸರ್ಕಾರೀ ಶಾಲಾ ಮಕ್ಕಳಿಗೂ ಸ್ಕೂಲ್ ಬಸ್ ಯೋಗ

School bus

Krishnaveni K

ಬೆಂಗಳೂರು , ಸೋಮವಾರ, 16 ಸೆಪ್ಟಂಬರ್ 2024 (09:37 IST)
Photo Credit: AI Image
ಬೆಂಗಳೂರು: ಖಾಸಗಿ ಶಾಲೆಗಳಂತೆ ಇನ್ನು ಮುಂದೆ ಸರ್ಕಾರೀ ಶಾಲಾ ಮಕ್ಕಳಿಗೂ ಸ್ಕೂಲ್ ಬಸ್ ನಲ್ಲಿ ಓಡಾಡುವ ಯೋಗ ಸಿಗಲಿದೆ. ಇಂಥಹದ್ದೊಂದು ಯೋಜನೆ ಜಾರಿಗೆ ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಸರ್ಕಾರೀ ಶಾಲೆಗಳಿಂದ ಮಕ್ಕಳು ದೂರವುಳಿಯುತ್ತಿದ್ದಾರೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದ ಕಾರಣ ಮಕ್ಕಳು ಶಾಲೆ ತಪ್ಪಿಸಿಕೊಳ್ಳುತ್ತಿದ್ದಾರೆ. ಅಂತಹ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಶಿಕ್ಷಣ ಇಲಾಖೆ ಈಗ ಬಸ್ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

ಕರ್ನಾಟಕ ಪಬ್ಲಿಕ್ ಶಾಲೆಗೆ ಬರುವ ಮಕ್ಕಳಿಗೆ ಪಿಕ್ ಅಪ್ ಮತ್ತು ಡ್ರಾಪ್ ವ್ಯವಸ್ಥೆ ಮಾಡಿಸಲು ಬಸ್ ವ್ಯವಸ್ಥೆ ಮಾಡುವ ಬಗ್ಗೆ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಇದೊಂದು ವಿನೂತನ ಪ್ರಯೋಗವಾಗಿದ್ದು, ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನವಾಗಿದೆ ಎಂದಿದ್ದಾರೆ.

4 ರಿಂದ 5 ಕಿ.ಮೀ. ವ್ಯಾಪ್ತಿಯೊಳಗಿನ ಮಕ್ಕಳನ್ನು ಶಾಲೆಗೆ ಕರೆತರಲು ಈ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಂಗಳೂರಿನ ಶಾಲೆಗಳಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತದೆ. ಬಳಿಕ ಹಂತ ಹಂತವಾಗಿ ಬೇರೆ ಬೇರೆ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸನ ಮುನಿರತ್ನಗೂ ರಾಕ್ ಲೈನ್ ವೆಂಕಟೇಶ್, ದರ್ಶನ್ ಗೂ ಇದೆ ಪರಮಾಪ್ತತೆ: ಇವರ ಹಿನ್ನಲೆಯೇನು