Publish Date: Tue, 23 Sep 2025 (08:36 IST)
Updated Date: Tue, 23 Sep 2025 (08:39 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕೊಂಚ ತಣ್ಣಗಾಗಿದ್ದ ವರುಣ ಇಂದು ಮತ್ತೆ ಅಬ್ಬರಿಸುವ ಸೂಚನೆಯಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಕರಾವಳಿ ಭಾಗದಲ್ಲಿ ಈಗ ಮಳೆ ತಕ್ಕ ಮಟ್ಟಿಗೆ ಕಡಿಮೆಯಾಗಿದ್ದರೂ ಪೂರ್ತಿ ನಿಂತಿಲ್ಲ. ಆದರೆ ರಾಜ್ಯದ ಉತ್ತರದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಬೆಂಗಳೂರು, ರಾಮನಗರ, ತುಮಕೂರು, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಕಲಬುರಗಿ, ಯಾದಗಿರಿ, ಇಂದು ಭಾರೀ ಮಳೆಯಾಗುವ ಸೂಚನೆಯಿದೆ.
ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ರಾಯಚೂರು, ಹಾವೇರಿ, ಕೊಪ್ಪಳ, ಗದಗ, ಬೀದರ್, ಚಿತ್ರದುರ್ಗ, ಸಾಧಾರಣ ಮಳೆ ಅಥವಾ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ. ಇಂದು ರಾಜ್ಯದ ಒಟ್ಟಾರೆ ಸರಾಸರಿ ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿಯಲಿದೆ ಎಂದು ತಿಳಿದುಬಂದಿದೆ.