Publish Date: Tue, 28 Oct 2025 (08:37 IST)
Updated Date: Tue, 28 Oct 2025 (08:39 IST)
ಬೆಂಗಳೂರು: ರಾಜ್ಯದಲ್ಲಿ ಇಂದು ಈ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆಯಿದೆ.
ಕಳೆದ ವಾರವಿಡೀ ರಾಜ್ಯಾದ್ಯಂತ ಭಾರೀ ಮಳೆಯಾಗಿತ್ತು. ಈ ಬಾರಿ ಹಿಂಗಾರು ಮಳೆಯೂ ಉತ್ತಮವಾಗಿಯೇ ಸುರಿದಿದೆ. ಇದೀಗ ಮಳೆಗಾಲ ಅಂತಿಮ ಕಾಲಕ್ಕೆ ಬಂದಿದೆ. ಈ ವಾರ ಬುಧವಾರದವರೆಗೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿದ್ದವು.
ಇಂದು ಬೀದರ್ ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮಂಡ್ಯ, ರಾಯಚೂರು, ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಗದಗ, ವಿಜಯಪುರ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.