Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗಿದೆ. ಇಂದು ಈ ಕೆಲವು ಜಿಲ್ಲೆಗಳಿಗೆ ಮಾತ್ರ ಮಳೆಯ ಸೂಚನೆಯಿದೆ.
ಹಿಂಗಾರು ಮಳೆ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ. ಮಂಗಳವಾರದಿಂದ ಕೆಲವು ಕಡೆ ಸಣ್ಣ ಮಳೆಯಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಹಗುರ ಮಳೆಯ ಸಾಧ್ಯತೆಯಿದೆ. ಉಳಿದ ಕಡೆ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಹಾಸನ, ಕೋಲಾರ, ರಾಮನಗರ, ಚಾಮರಾಜಗರ ಜಿಲ್ಲೆಗಳಲ್ಲಿ ಇಂದು ಸಣ್ಣ ಮಳೆಯಾಗುವ ಸಾಧ್ಯತೆಯಿದೆ. ಕೊಡಗಿನಲ್ಲಿ ಇಂದು ಮಳೆಯಿಲ್ಲವಾದರೂ ಗುಡುಗಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ಹಾಸನ, ಮಂಡ್ಯ, ಕೊಡಗು, ಮೈಸೂರು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಹಾವೇರಿ, ಗದಗ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.