Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕರ್ನಾಟಕದಲ್ಲಿ ಮಳೆಗಾಲ ಯಾಕೋ ಮುಗಿಯುವ ಲಕ್ಷಣವೇ ಇಲ್ಲ. ವಾರಕ್ಕೊಮ್ಮೆಯಾದರೂ ಯಾವುದಾದರೂ ಒಂದು ಜಿಲ್ಲೆಯಲ್ಲಾದರೂ ಮಳೆ ಬಂದೇ ಬರುತ್ತದೆ. ಇಂದೂ ಈ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.
ಇಂದಿನಿಂದ ಎರಡು-ಮೂರು ದಿನಗಳವರೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕಳೆದ ವಾರ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು.
ಇಂದು ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ, ತುಮಕೂರು, ಬೆಂಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ರಾಯಚೂರು, ವಿಜಯಪುರ, ಬೀದರ್, ಗದಗ, ಬಳ್ಳಾರಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.