Publish Date: Sat, 23 Aug 2025 (08:31 IST)
Updated Date: Sat, 23 Aug 2025 (08:34 IST)
ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ತಕ್ಕ ಮಟ್ಟಿಗೆ ಕಡಿಮೆಯಾಗಿದೆ. ಇಂದು ರಾಜ್ಯಾದ್ಯಂತ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ.
ಈ ವಾರದ ಆರಂಭದಲ್ಲಿದ್ದ ಮಳೆಯ ಅಬ್ಬರ ವಾರಂತ್ಯಕ್ಕೆ ಕಡಿಮೆಯಾಗಿದೆ. ವಾರದ ಆರಂಭದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಿತ್ತು. ಆದರೆ ಗುರುವಾರದಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.
ನಿನ್ನೆಯೂ ಬಹುತೇಕ ಕಡೆ ಮೋಡಕವಿದ ವಾತಾವರಣವಿತ್ತು. ಇಂದೂ ಅದೇ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ತಕ್ಕ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಉಳಿದಂತೆ ಇಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಮೊದಲಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.