ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಆದರೆ ಇಂದು ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.
ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆ, ಮಲೆನಾಡಿನಲ್ಲಿ ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ಅಬ್ಬರ ಜೋರಾಗಿಯೇ ಮುಂದುವರಿದಿತ್ತು. ಆದರೆ ಇಂದು ಬೆಂಗಳೂರಿನಲ್ಲೂ ಮಳೆಯ ಲಕ್ಷಣಗಳಿಲ್ಲ. ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಇಂದು ಮಳೆಯ ಸಾಧ್ಯತೆ ಕಡಿಮೆ.
ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಇಂದೂ ಮಳೆಯ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆದರೆ ಚಾಮರಾಜನಗರದಲ್ಲಿ ಬಿಸಿಲಿನ ವಾತಾವರಣವಿರಲಿದೆ.
ದಾವಣಗೆರೆ, ಬಾಗಲಕೋಟೆ, ಹಾವೇರಿ, ಕಲಬುರಗಿ, ಬೀದರ್, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕೊಪ್ಪಳ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಗದಗ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ವಿಜಯಪುರ, ಬಳ್ಳಾರಿ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.