Publish Date: Wed, 10 Sep 2025 (08:29 IST)
Updated Date: Wed, 10 Sep 2025 (08:31 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ವರುಣ ಕೊಂಚ ತಣ್ಣಗಾಗಿದ್ದಾನೆ. ಕೆಲವು ಜಿಲ್ಲೆಗಳಲ್ಲಿ ಬಿಟ್ಟರೆ ಉಳಿದೆಡೆ ಬಿಸಿಲಿನ ವಾತಾವರಣವಿತ್ತು. ಇಂದಿನಿಂದ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳ ಹವಾಮಾನ ವರದಿಯನ್ನು ತಪ್ಪದೇ ಗಮನಿಸಿ.
ಬೆಂಗಳೂರಿನಲ್ಲಿ ಕಳೆದ ವಾರವಿಡೀ ಭಾರೀ ಮಳೆಯಾಗಿತ್ತು. ಬೆಳಿಗ್ಗೆ ಬಿಸಿಲು ಮಧ್ಯಾಹ್ನದಿಂದ ಮಳೆ ಎಂಬಂತಿತ್ತು. ಆದರೆ ಕಳೆದ ಮೂರು ದಿನಗಳಿಂದ ಬಿಸಿಲಿನ ವಾತಾವರಣವಿತ್ತು. ನಿನ್ನೆಯೂ ಇದೇ ಪರಿಸ್ಥಿತಿಯಿತ್ತು. ಇಂದೂ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ಆದರೆ ನಾಳೆಯಿಂದ ವಾರಂತ್ಯದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಆದರೆ ಕರಾವಳಿ ಜಿಲ್ಲೆಗಳಲ್ಲಿ ಇಂದೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಗದಗ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ,ಶಿವಮೊಗ್ಗ,
ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ತುಮಕೂರು, ರಾಮನಗರ, ಬೆಳಗಾವಿ, ವಿಜಯಪುರ, ಬೀದರ್, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆಯಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ವರದಿ ಎಚ್ಚರಿಕೆ ನೀಡಿದೆ.