Publish Date: Wed, 24 Sep 2025 (08:54 IST)
Updated Date: Wed, 24 Sep 2025 (08:56 IST)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಈಗ ಮಳೆಯ ಅಬ್ಬರಿಸುತ್ತಿದೆ. ಮೊನ್ನೆಗೆ ಹೋಲಿಸಿದರೆ ಇಂದು ಮತ್ತು ನಾಳೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಆದರೂ ಇಲ್ಲಿರೋದು ಟ್ವಿಸ್ಟ್.
ಕರ್ನಾಟಕದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರದ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿತ್ತು. ಆದರೆ ಇಂದು ಮತ್ತು ನಾಳೆ ಕೊಂಚ ಮಟ್ಟಿಗೆ ತೀವ್ರತೆ ಕಡಿಮೆಯಾಗಿರಲಿದೆ. ಹಾಗಿದ್ದರೂ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಆದರೆ ವಾರಂತ್ಯಕ್ಕೆ ಮತ್ತೆ ಮಳೆ ಜೋರಾಗಲಿದೆ.
ಹಾಗಿದ್ದರೂ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಇಂದೂ ಯೆಲ್ಲೊ ಅಲರ್ಟ್ ಘೋಷಣೆಯಾಗಲಿದೆ. ಕರಾವಳಿ ಜಿಲ್ಲೆಗಳಿಗೂ ಇಂದು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು,ಕೋಲಾರ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯ ನಿರೀಕ್ಷಿಸಲಾಗಿದೆ.
ಉಳಿದಂತೆ ಹಾವೇರಿ, ರಾಯಚೂರು, ಚಿಕ್ಕಮಗಳೂರು, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಗದಗ, ಶಿವಮೊಗ್ಗ, ಯಾದಗಿರಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬರಲಿದೆ.