Publish Date: Fri, 03 Oct 2025 (08:36 IST)
Updated Date: Fri, 03 Oct 2025 (08:38 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಈ ಕೆಲವು ಜಿಲ್ಲೆಗಳಿಗೆ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಅಕ್ಟೋಬರ್ 2 ರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ಆಸುಪಾಸಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಅಥವಾ ಮೋಡ ಕವಿದ ವಾತಾವರಣವಿರಲಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದೊಡ್ಡ ಬಳ್ಳಾಪುರ, ಕೋಲಾರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಮೈಸೂರು, ತುಮಕೂರು, ಚಿತ್ರದುರ್ಗ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಮೋಡ ಕವಿದ ಅಥವಾ ಬಿಸಿಲಿನ ವಾತಾವರಣವಿರಲಿದೆ.