Publish Date: Wed, 08 Oct 2025 (08:43 IST)
Updated Date: Wed, 08 Oct 2025 (08:45 IST)
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ಕೆಲವು ಜಿಲ್ಲೆಗಳಿಗೆ ಮಳೆಯಾಗಲಿದೆ. ಅದರಲ್ಲೂ ಇಂದು ಈ ಕೆಲವು ಜಿಲ್ಲೆಗಳಿಗೆ ಗುಡುಗು ಸಹಿತ ಮಳೆಯ ಸೂಚನೆಯಿದೆ.
ಈ ವಾರದ ಆರಂಭದಲ್ಲಿ ಕೆಲವೇ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಬಿಸಿಲಿನ ವಾತಾವರಣವಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಗಲು ಹೊತ್ತು ಬಿಸಿಲು ಸಂಜೆ ಮೋಡ ಕವಿದ ವಾತಾವರಣ ಕಂಡುಬರುತ್ತಿತ್ತು. ಆದರೆ ಇಂದಿನಿಂದ ವಾರಂತ್ಯದವರೆಗೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಹವಾಮಾನ ವರದಿಗಳ ಪ್ರಕಾರ ಅಕ್ಟೋಬರ್ 10 ರವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಇಂದು ವಿಶೇಷವಾಗಿ ಬೆಂಗಳೂರು, ಯಾದಗಿರಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾವೇರಿ, ಕೊಪ್ಪಳ, ರಾಯಚೂರು, ಗದಗ, ಬೀದರ್, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಮೈಸೂರು, ಮಂಡ್ಯ, ಕಲಬುರಗಿ, ವಿಜಯಪುರ, ಹುಬ್ಬಳ್ಳಿ, ಬಾಗಲಕೋಟೆ, ಧಾರವಾಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲು ಕಂಡುಬರುವುದು.