Publish Date: Thu, 09 Oct 2025 (08:48 IST)
Updated Date: Thu, 09 Oct 2025 (08:50 IST)
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. ಅದರ ಜೊತೆಗೆ ಈಗ ಚಂಡಮಾರುತದ ಪರಿಣಾಮವೂ ಸೇರಿ ಉತ್ತಮ ಮಳೆಯಾಗುತ್ತಿದೆ. ಇನ್ನು ಎಷ್ಟು ದಿನದವರೆಗೆ ಮಳೆಯಿರಲಿದೆ ಇಲ್ಲಿದೆ ವಿವರ.
ಸಾಮಾನ್ಯವಾಗಿ ಅಕ್ಟೋಬರ್ ಬಂತೆಂದರೆ ಮಳೆ ಮುಗಿದಿರುತ್ತದೆ. ಆದರೆ ಈ ಬಾರಿ ಅಕ್ಟೋಬರ್ ನಲ್ಲೂ ಮಳೆಯಾಗುತ್ತಿದೆ. ಇದಕ್ಕೆ ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದ ಚಂಡಮಾರುತವೂ ಕಾರಣವಾಗಿದೆ. ಇನ್ನು ನಾಲ್ಕು ದಿನಗಳವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ವರದಿಗಳು ಹೇಳುತ್ತಿವೆ.
ಇದೀಗ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಪೂರ್ತಿ ನಿಂತಿಲ್ಲ. ಒಮ್ಮೊಮ್ಮೆ ಮಳೆಯಾಗುತ್ತಲೇ ಇದೆ. ಈ ವಾರಂತ್ಯದಿಂದ ಮೂರು-ನಾಲ್ಕು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸೂಚನೆಯಿದೆ.
ಚಾಮರಾಜನಗರ, ಚಿತ್ರದುರ್ಗ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರಗಿ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಹುಬ್ಬಳ್ಳಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.