Publish Date: Fri, 10 Oct 2025 (08:56 IST)
Updated Date: Fri, 10 Oct 2025 (08:58 IST)
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಸೂಚನೆ ನೀಡುತ್ತಿವೆ.
ಚಂಡಮಾರುತದ ಪರಿಣಾಮ ಇಂದಿನಿಂದ ನಾಲ್ಕು ದಿನಗಳವರೆಗೆ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮುಂದಿನ ಮಂಗಳವಾರದವರೆಗೂ ಮಳೆಯ ವಾತಾವರಣವಿರಲಿದೆ.
ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.
ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮಂಡ್ಯ, ದಾವಣಗೆರೆ, ಬೀದರ್, ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಅಥವಾ ಗುಡುಗು ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.