Publish Date: Thu, 16 Oct 2025 (09:01 IST)
Updated Date: Thu, 16 Oct 2025 (09:20 IST)
ಬೆಂಗಳೂರು: ಒಮ್ಮೆ ಕೊಂಚ ತಣ್ಣಗಾಗಿದ್ದ ವರುಣ ಮತ್ತೆ ಅಬ್ಬರಿಸಲಿದ್ದಾನೆ. ಬೆಂಗಳೂರು ಸೇರಿದಂತೆ ಈ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ವಾರದ ಆರಂಭದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಬೆಂಗಳೂರಿನಲ್ಲೂ ಸಣ್ಣ ಮಟ್ಟಿಗೆ ಮಳೆ ಕಂಡುಬಂದಿತ್ತು. ಇದೀಗ ವಾರಂತ್ಯಕ್ಕೆ ಮಳೆ ಇನ್ನಷ್ಟು ತೀವ್ರವಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮುಂದಿನ ಐದು ದಿನ ಮಳೆಯಿರಲಿದೆ ಎನ್ನಲಾಗಿದೆ.
ಬಂಗಾಳ ಉಪಮಹಾಸಾಗರದಲ್ಲಿ ನೈಋತ್ಯ ಮಾನ್ಸೂನ್ ಚುರುಕಾಗಿದ್ದು ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು, ರಾಮನಗರ, ಕೋಲಾರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿತ್ರದುರ್ಗ, ಹಾವೇರಿ, ಗದಗ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ದಾವಣಗೆರೆ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.