Publish Date: Mon, 20 Oct 2025 (09:54 IST)
Updated Date: Mon, 20 Oct 2025 (09:56 IST)
ಬೆಂಗಳೂರು: ಕಳೆದ ವಾರ ಕರಾವಳಿ ಜಿಲ್ಲೆಗಳು, ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಅಲ್ಲಲ್ಲಿ ಮಳೆಯಾಗುತ್ತಲೇ ಇತ್ತು. ಈ ವಾರವಿಡೀ ಮಳೆಯಿರುತ್ತಾ ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ವಾರದ ಹವಾಮಾನ ವರದಿ.
ರಾಜ್ಯದಲ್ಲಿ ಈಗ ಈಶಾನ್ಯ ಮಾನ್ಸೂನ್ ಆರಂಭವಾಗಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಲೇ ಇತ್ತು. ಈ ವಾರವೂ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ಹಾವೇರಿ, ತುಮಕೂರು, ಹಾಸನ, ಕೊಪ್ಪಳ, ಬಳ್ಳಾರಿ, ವಿಜಯಪುರ, ದಾವಣಗೆರೆ, ಬಾಗಲಕೋಟೆ, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ವಾರದ ಆರಂಭದಲ್ಲೇ ಗುಡುಗು ಸಹಿತ ಮಳೆಯಾಗಲಿದೆ.
ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗದಗ, ಶಿವಮೊಗ್ಗ, ಯಾದಗಿರಿ ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದಿಂದ ಮಳೆಯಾಗುವ ಸಾಧ್ಯತೆಯಿದೆ.