Publish Date: Tue, 21 Oct 2025 (08:51 IST)
Updated Date: Tue, 21 Oct 2025 (08:54 IST)
ಬೆಂಗಳೂರು: ರಾಜ್ಯದಲ್ಲಿ ಈಗ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದಿನಿಂದ ಮೂರು ದಿನಗಳ ಕಾಲ ಈ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ವಾರಂತ್ಯದಲ್ಲಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗಿತ್ತು. ಕೆಲವು ಕಡೆ ಗುಡುಗು ಸಹಿತ ಮಳೆಯಾಗಿದ್ದರೆ ಇನ್ನು ಕೆಲವು ಕಡೆ ಮೋಡ ಕವಿದ ವಾತಾವರಣವಿತ್ತು. ಮೂಲಗಳ ಪ್ರಕಾರ ಗುರುವಾರದವರೆಗೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ರಾಯಚೂರು, ವಿಜಯಪುರ, ಕಲಬುರಗಿ, ಬಳ್ಳಾರಿ, ಬೆಳಗಾವಿ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಉತ್ತರ ಕನ್ನಡ, ಮಂಡ್ಯ, ಹಾವೇರಿ, ಗದಗ, ಬೀದರ್, ದಾವಣಗೆರೆ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.