Publish Date: Wed, 22 Oct 2025 (08:55 IST)
Updated Date: Wed, 22 Oct 2025 (08:57 IST)
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದೂ ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ಎರಡು ದಿನಗಳಿಂದ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಕಂಡುಬಂದಿತ್ತು. ಈ ವಾರವಿಡೀ ಇದೇ ರೀತಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ದಕ್ಷಣ ಕನ್ನಡ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದಾವಣಗೆರೆ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಕೋಲಾರ, ಮೈಸೂರು, ಬಾಗಲಕೋಟೆ, ವಿಜಯಪುರ, ಕಲಬುರಗಿ, ಗದಗ, ಬೀದರ್, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಕಂಡುಬರುವುದು ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮುಂದಿನ ಮೂರು-ನಾಲ್ಕು ದಿನಗಳಿಗೆ ಮಳೆಯ ನಿರೀಕ್ಷೆಯಿದೆ.