Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಕಂಡುಬರುತ್ತಿದೆ. ಈ ವಾರಂತ್ಯಕ್ಕೆ ಮಳೆಯಿರುತ್ತಾ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.
ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 29 ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಹಾಗಿದ್ದರೂ ಕಳೆದ ಮೂರು-ನಾಲ್ಕು ದಿನಗಳಿಗೆ ಹೋಲಿಸಿದರೆ ಇಂದು ಕೊಂಚ ಅಬ್ಬರ ಕಡಿಮೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ರಾಮಗರನಗರ, ಹಾವೇರಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಬೀದರ್, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಕಲಬುರಗಿ, ಯಾದಗಿರಿ, ದಾವಣೆಗೆರೆ ಜಿಲ್ಲೆಗಳಲ್ಲಿ ಇಂದು ಅಥವಾ ನಾಳೆ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು, ಚಾಮರಾಜಗರ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಹಾಸನ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.