Publish Date: Saturday, 01 November 2025 (08:47 IST)
Updated Date: Saturday, 01 November 2025 (08:49 IST)
ಬೆಂಗಳೂರು: ರಾಜ್ಯದಲ್ಲಿ ಈಗ ಎರಡು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ವಾರಂತ್ಯಕ್ಕೆ ಮಳೆ ಬಗ್ಗೆ ಮಹತ್ವದ ಅಪ್ ಡೇಟ್ ಇಲ್ಲಿದೆ ನೋಡಿ.
ರಾಜ್ಯದಲ್ಲಿ ಸೈಕ್ಲೋನ್ ಪರಿಣಾಮ ಕಳೆದ ವಾರದ ಆರಂಭಿಕ ನಾಲ್ಕು ದಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿತ್ತು. ಆದರೆ ಈಗ ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದೆ. ಆದರೆ ವಾರಂತ್ಯಕ್ಕೆ ಹವಾಮಾನದಲ್ಲಿ ಮತ್ತೆ ಬದಲಾವಣೆಯಾಗಲಿದೆ.
ಇಂದು ಬಹುತೇಕ ಕಡೆ ಮಳೆಯಿರಲ್ಲ. ಆದರೆ ನಾಳೆ ಭಾನುವಾರ ಕೆಲವು ಕಡೆ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಕೋಲಾರ, ಹಾವೇರಿ, ರಾಯಚೂರು, ಗದಗ, ಬೀದರ್, ಬಾಗಲಕೋಟೆ, ದಾವಣಗೆರೆ, ಬೆಳಗಾವಿ, ಯಾದಗಿರಿ, ಬಳ್ಳಾರಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಶಿವಮೊಗ್ಗ,ವಿಜಯಪುರ ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ಅಥವಾ ಬಿಸಿಲಿನ ವಾತಾವರಣವಿರಲಿದೆ.