Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕಳೆದ ಎರಡು ಮೂರು ದಿನದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ ಎಂಬ ಬಗ್ಗೆ ಇಲ್ಲಿದೆ ಹವಾಮಾನ ವರದಿ.
ಬೆಂಗಳೂರು, ಕರಾವಳಿ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಗಳ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ನಿರೀಕ್ಷೆಯಿದೆ.
ಕೋಲಾರ, ಬಳ್ಳಾರಿ, ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಹನಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಬೀದರ್, ಗದಗ, ವಿಜಯಪುರ, ಕೊಪ್ಪಳ, ಯಾದಗಿರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.