Publish Date: Sat, 08 Nov 2025 (08:35 IST)
Updated Date: Sat, 08 Nov 2025 (08:37 IST)
ಬೆಂಗಳೂರು: ರಾಜ್ಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಹಿಂಗಾರು ಮಳೆ ಸುರಿದಿತ್ತು. ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆ, ಯಾವೆಲ್ಲಾ ಜಿಲ್ಲೆಗಳ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ.
ಈ ಬಾರಿ ಮುಂಗಾರು ಮಳೆ ಬಳಿಕ ಹಿಂಗಾರು ಕೂಡಾ ಚುರುಕಾಗಿದೆ. ಇದರ ನಡುವೆ ಸೈಕ್ಲೋನ್ ಪರಿಣಾಮವೂ ಸೇರಿದ್ದರಿಂದ ರಾಜ್ಯಾದ್ಯಂತ ಮಳೆಯಾಗಿತ್ತು. ಈ ವಾರದ ಆರಂಭದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಆದರೆ ವಾರದ ಅಂತ್ಯಕ್ಕೆ ಬರುತ್ತಿದ್ದಂತೇ ಮಳೆಯ ಅಬ್ಬರ ಕಡಿಮೆಯಾಗುತ್ತಿದೆ.
ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣವಿರಲಿದೆ. ಈ ವಾರಂತ್ಯಕ್ಕೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣವಿರಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಗದಗ, ಹಾವೇರಿ, ಬೀದರ್, ರಾಯಚೂರು, ಯಾದಗಿರಿ, ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ವಾರಂತ್ಯದ ಎರಡೂ ದಿನಗಳಲ್ಲಿ ಬಿಸಿಲು ಅಥವಾ ಮೋಡ ಕವಿದ ವಾತಾವರಣವಿರಲಿದೆ.