Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮಳೆಯ ಪರ್ವ ಸಂಪೂರ್ಣವಾಗಿ ನಿಂತಿಲ್ಲ. ಇಂದು ಈ ಕೆಲವು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಇಂದಿನಿಂದ ಎರಡು ದಿನಗಳ ಕಾಲ ಕೆಲವೆಡೆ ಗುಡುಗು ಸಹಿತ ಮಳೆಯಿದ್ದರೆ ಇನ್ನು ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳುತ್ತಿದೆ. ವಿಶೇಷವಾಗಿ ಬೆಂಗಳೂರಿನ ಸುತ್ತಮುತ್ತಲಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಅದರಲ್ಲೂ ಕೊಡಗಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ರಾಯಚೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ಯಾದಗಿರಿ, ಗದಗ, ಬೀದರ್ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.