Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಈಗ ಒಂದೊಂದು ಜಿಲ್ಲೆಗಳಿಗೆ ಮಳೆಯಾದರೆ ಮತ್ತೆ ಕೆಲವು ಜಿಲ್ಲೆಗಳಿಗೆ ವಿಪರೀತ ಚಳಿಯ ವಾತಾವರಣವಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.
ಬಂಗಾಳದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಮಳೆ ಇನ್ನಷ್ಟು ದಿನ ವಿಸ್ತರಣೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಜಿಲ್ಲೆ, ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆ ಕಂಡುಬರುತ್ತಿದೆ. ಆದರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಚಳಿ ಹೆಚ್ಚಾಗಿದೆ.
ಮೈಸೂರು, ಮಂಡ್ಯ, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ದಟ್ಟ ಮೋಡ ಕವಿದ ಮತ್ತು ಕೆಲವೆಡೆ ಸಣ್ಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಬೀದರ್, ಬೆಳಗಾವಿ, ವಿಜಯಪುರ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ದಾವಣಗೆರೆ, ಬಾಗಲಕೋಟೆ, ಶಿವಮೊಗ್ಗ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಮತ್ತು ಬಿಸಿಲಿನ ವಾತಾವರಣವಿರಲಿದೆ.