Publish Date: Sat, 18 Oct 2025 (08:21 IST)
Updated Date: Sat, 18 Oct 2025 (08:23 IST)
ಬೆಂಗಳೂರು: ವಾರವಿಡೀ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಲೇ ಇತ್ತು. ಈ ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ವಾರಂತ್ಯದ ಹವಾಮಾನ ವರದಿ.
ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶವಾಗಿದ್ದು, ವಾರಂತ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮುಂದಿನ ಎರಡು-ಮೂರು ದಿನಗಳವರೆಗೂ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬಳ್ಳಾರಿ, ಗುಡುಗು ಸಹಿತ ಮಳೆಯಾಗಲಿದೆ. ಉಳಿದಂತೆ ಚಿಕ್ಕಮಗಳೂರು, ಕೋಲಾರ, ಬೆಳಗಾವಿ ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ಹಾಸನ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ರಾಯಚೂರು, ಹಾವೇರಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಅಥವಾ ಬಿಸಿಲಿನ ವಾತಾವರಣವಿರಲಿದೆ.