Publish Date: Wed, 25 Mar 2026 (08:27 IST)
Updated Date: Wed, 25 Mar 2026 (08:29 IST)
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದೂ ಮಳೆಯ ಸಾಧ್ಯತೆಯಿದೆ. ವಿಶೇಷವಾಗಿ ಈ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.
ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ವಾರ ಮಳೆಯಾಗಿತ್ತು. ಆದರೆ ಈ ವಾರ ಬೆಂಗಳೂರಿನಲ್ಲಿ ಮಳೆಯಾಗಿಲ್ಲ. ಒಂದೆಡೆ ಮಳೆಯಿದ್ದರೆ ಇನ್ನೊಂದೆಡೆ ತಾಪಮಾನದಲ್ಲೂ ಗಣನೀಯವಾಗಿ ಏರಿಕೆ ಕಂಡುಬರುತ್ತಿದೆ.
ಇಂದು ಕೊಡಗು ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಅಲ್ಲದೆ ಚಿತ್ರದುರ್ಗ, ಹಾವೇರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಎರಡು ದಿನ ಈ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.
ಉಳಿದ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಅಥವಾ ಉರಿ ಬಿಸಿಲಿನ ವಾತಾವರಣವಿರಲಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟಿರಲಿದೆ. ಇಂದು ಕನಿಷ್ಠ ತಾಪಮಾನ 21 ಡಿಗ್ರಿಯಷ್ಟಿರಲಿದೆ.