Daily Horoscope
✕

Karnataka Weather: ಇಂದು ಈ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ಜನರಿಗೆ ಎಚ್ಚರಿಕೆ

Krishnaveni K
ಶುಕ್ರವಾರ, 13 ಮಾರ್ಚ್ 2026 (09:23 IST)
ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು ಜನರಿಗೆ ಎಚ್ಚರಿಕೆಯಿಂದಿರುವುದು ಅಗತ್ಯ. ಇಂದಿನ  ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಬಿಸಿಲು, ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಮುಂದಿನ ಮೂರು ದಿನಗಳಿಗೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಮಾರ್ಚ್ 12 ರಿಂದ 15 ರೊಳಗೆ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ. ಅದರಲ್ಲೂ ವಿಶೇಷವಾಗಿ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ  ಗರಿಷ್ಠ ತಾಪಮಾನ 37 ಡಿಗ್ರಿ ತಲುಪುವ ಸಾಧ್ಯತೆಯಿದೆ. ಇನ್ನು, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಬೀದರ್, ದಾವಣಗೆರೆ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿರಲಿದೆ.

ಉಳಿದ ಜಿಲ್ಲೆಗಳಲ್ಲಿ 32-34 ಡಿಗ್ರಿಯಷ್ಟು ಗರಿಷ್ಠ ತಾಪಮಾನ ಕಂಡುಬರುವುದು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments