Publish Date: Sun, 22 Feb 2026 (11:53 IST)
Updated Date: Sun, 22 Feb 2026 (11:56 IST)
ಬೆಂಗಳೂರು: ಕರ್ನಾಟಕದ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಒಣಹವೆ ಮುಂದುವರೆಯಲಿದೆ. ಹೀಗಾಗಿ, , ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಮಳೆಯ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಗುಡುಗು ಮತ್ತು ಮಿಂಚಿನ ಆರ್ಭಟವಿರಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಸುಮಾರು 5 ಮಿ.ಮೀ ನಿಂದ 15 ಮಿ.ಮೀ ವರೆಗೆ ಮಳೆಯಾಗಬಹುದು.
ದಕ್ಷಿಣ ಕನ್ನಡ , ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಗುವ ಸಂಭವವಿದ್ದು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 ಕಿ.ಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣ ಇರಲಿದೆ.