Publish Date: Friday, 20 February 2026 (08:34 IST)
Updated Date: Friday, 20 February 2026 (08:38 IST)
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಇಂದಿನ ಹವಾಮಾನ ವರದಿ ಗಮನಿಸಿದರೆ ಮತ್ತಷ್ಟು ತಾಪಮಾನದಲ್ಲಿ ಏರಿಕೆ ಕಾಣಬಹುದಾಗಿದೆ.
ಕಳೆದ ಎರಡು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೇರಳದಲ್ಲಿ ಇಂದು ಮಳೆಯ ಸೂಚನೆಯಿದೆ. ಈ ಹಿನ್ನಲೆಯಲ್ಲಿ ಕೆಲವು ಕಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಆದರೆ ಇಂದು ರಾಜ್ಯದಲ್ಲಿ ಬಹುತೇಕ ಬಿಸಿಲಿನ ವಾತಾವರಣವಿರಲಿದೆ.
ಹವಾಮಾನ ವರದಿಗಳ ಪ್ರಕಾರ ಇಂದು ರಾಜ್ಯದಲ್ಲಿ ಮಳೆಯ ಸೂಚನೆಯಿಲ್ಲ. ಚಳಿಯೂ ಇಂದು ತಕ್ಕಮಟ್ಟಿಗೆ ಕಡಿಮೆಯಾಗಿರಲಿದೆ. ಬಹುತೇಕ ಒಣ ಹವೆ ಮುಂದುವರಿಯುವುದು. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.
ಇಂದು ರಾಜ್ಯದ ಗರಿಷ್ಠ ತಾಪಮಾನ 31 ಡಿಗ್ರಿಗೆ ಏರಿಕೆಯಾಗಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿಯಷ್ಟಾಗಲಿದೆ. ಕರಾವಳಿ ಜಿಲ್ಲೆಯಲ್ಲಂತೂ ಇಂದು ಗರಿಷ್ಠ ತಾಪಮಾನ 36 ಡಿಗ್ರಿಗೆ ಏರಿಕೆಯಾಗಲಿದೆ. ವಿಪರೀತ ಬಿಸಿಲು ಮತ್ತು ಸೆಖೆಯ ವಾತಾವರಣ ಕಂಡುಬರಲಿದೆ.