ಬೆಂಗಳೂರು: ಕಳೆದ ಕೆಲವು ಸಮಯದಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿತ್ತು. ಈಗಲೂ ಮಳೆ ಮುಂದುವರಿದಿದ್ದು ಅದರ ಜೊತೆಗೆ ಬಿರುಗಾಳಿಯೂ ಆಗುತ್ತಿದೆ. ಕೆಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆಗಳು ವರದಿಯಾಗಿವೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರ್ನಾಟಕದ ಒಟ್ಟು 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲೂ ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲೂ ಬೆಳಿಗ್ಗೆಯಿಂದಲೇ ಭಾರೀ ಮೋಡ ಕವಿದ ವಾತಾವರಣಿದೆ. ಇಂದೂ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆಯೂ ಬೆಂಗಳೂರಿನಲ್ಲಿ ಮಳೆಯಾಗಿತ್ತು. ರಾಜ್ಯ ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ಟ್ ನಿದೆ.
ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಮೈಸೂರು, ವಿಜಯನಗರ, ತುಮಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಇಂದು ಮಳೆಯಾಗಲಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಒಂದು ವಾರ ಕಾಲ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.