Publish Date: Tue, 10 Nov 2026 (09:04 IST)
Updated Date: Mon, 09 Nov 2026 (19:23 IST)
ಬೆಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಉಷ್ಣಾಂಶ ವ್ಯತ್ಯಾಸ ಕಂಡುಬರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಕರಾವಳಿ ಕರ್ನಾಟಕಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ನಾಳೆ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದ್ದು, ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿರಲಿದೆ.
ದಕ್ಷಿಣ ಒಳನಾಡು
ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಅಥವಾ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯ ಮುನ್ಸೂಚನೆ ತೀರಾ ಕಡಿಮೆಯಿದೆ. ಮುಂಜಾನೆ ಕೊಂಚ ತಂಪು ಗಾಳಿ ಹಾಗೂ ಮಂಜು ಕವಿದ ವಾತಾವರಣ ಕಂಡುಬರಲಿದೆ.
ಉತ್ತರ ಒಳನಾಡು
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ್, ಹಾವೇರಿ, ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಕಲ್ಬುರ್ಗಿ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆ ಮುಂದುವರಿಯಲಿದೆ. ಹಗಲಿನ ವೇಳೆಯಲ್ಲಿ ಸಾಧಾರಣ ಬಿಸಿಲು ಹಾಗೂ ರಾತ್ರಿ ಮತ್ತು ಮುಂಜಾನೆಯ ವೇಳೆಯಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ.
ಮಲೆನಾಡು ಭಾಗಗಳುಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ