Publish Date: Fri, 03 Apr 2026 (08:41 IST)
Updated Date: Fri, 03 Apr 2026 (08:43 IST)
ಬೆಂಗಳೂರು: ರಾಜ್ಯದಲ್ಲಿ ಈಗ ಕೆಲವು ಕಡೆ ಬಿಸಿಲಿದ್ದರೆ ಮತ್ತೆ ಕೆಲವು ಕಡೆ ಮಳೆಯಾಗುತ್ತಿದೆ. ಇಂದು ರಾಜ್ಯದ ಹವಾಮಾನದಲ್ಲಿ ಆಗಲಿರುವ ಈ ಮಹತ್ವದ ಬದಲಾವಣೆಯನ್ನು ತಪ್ಪದೇ ಗಮನಿಸಿ.
ಇಷ್ಟು ದಿನ ಕೆಲವು ಕಡೆ ಮಳೆಯಿದ್ದರೆ ಮತ್ತೆ ಕೆಲವು ಕಡೆ ಬಿಸಿಲಿನ ವಾತಾವರಣವಿತ್ತು. ಆದರೆ ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯಿದ್ದರೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಅಥವಾ ಸಾಧಾರಣ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.
ಉಳಿದ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ರಾಯಚೂರು, ಬಳ್ಳಾರಿ, ಕಲಬುರಗಿಯಲ್ಲಿ ಇಂದು ಗರಿಷ್ಠ ತಾಪಮಾನ 37 ಡಿಗ್ರಿಯಷ್ಟಿರಲಿದೆ. ಕರ್ನಾಟಕದಲ್ಲಿ ಇಂದು ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರುವ ಸಾಧ್ಯತೆಯಿದೆ.