Publish Date: Sat, 04 Oct 2025 (12:15 IST)
Updated Date: Sat, 04 Oct 2025 (12:18 IST)
ಬೆಂಗಳೂರು: ಈ ವಾರ ಕೆಲವು ಜಿಲ್ಲೆಗಳನ್ನು ಬಿಟ್ಟರೆ ಉಳಿದ ಕಡೆ ಮಳೆಯ ಅಬ್ಬರ ಕಡಿಮೆಯಾಗಿದೆ. ಈ ವಾರಂತ್ಯಕ್ಕೆ ಮಳೆಯಿರುತ್ತಾ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.
ಈ ವಾರದ ಆರಂಭದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಕರಾವಳಿ ಜಿಲ್ಲೆಗಳಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಲೇ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಇನ್ನಷ್ಟು ಜಿಲ್ಲೆಗಳಿಗೆ ವಾರಂತ್ಯಕ್ಕೆ ಮಳೆಯ ಸೂಚನೆಯಿದೆ.
ದಕ್ಷಿಣ ಕನ್ನಡ, ಹಾಸನ, ಬೆಂಗಳೂರು, ಹಾವೇರಿ, ದಾವಣಗೆರೆ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ರಾಯಚೂರು, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲು ಕಂಡುಬರಲಿದೆ.