Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

Krishnaveni K
ಶನಿವಾರ, 3 ಜನವರಿ 2026 (08:39 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಚಳಿ ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು. ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ.

ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ತಾಪಮಾನದಲ್ಲಿ ಕೊಂಚ ಏರಿಕೆಯಾಗಿತ್ತು. 16 ಡಿಗ್ರಿಯಷ್ಟು ಕನಿಷ್ಠ ತಾಪಮಾನ ಹೊಂದಿದ್ದ ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 18 ಡಿಗ್ರಿಯವರೆಗೆ ತಲುಪಿದ್ದೂ ಇತ್ತು.

ಅದರೆ ಇಂದಿನಿಂದ ಮತ್ತೆ ಚಳಿ ತೀವ್ರವಾಗಲಿದೆ. ವಾರಂತ್ಯದಲ್ಲಿ ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಯಷ್ಟಾಗುವ ಸಾಧ್ಯತೆಯಿದೆ. ಬೀದರ್, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಕುಸಿತವಾಗಲಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ಬೆಳಗಾವಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments