Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮಳೆ ಕಡಿಮೆಯಾಗಿದ್ದು, ಚಳಿಗಾಲದ ವಾತಾವರಣ ಕಂಡುಬರುತ್ತಿದೆ. ಇಂದು ಯಾವ ಜಿಲ್ಲೆಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಲಿದೆ ಇಲ್ಲಿದೆ ಹವಾಮಾನ ವರದಿ.
ಕಳೆದ ವಾರವೇನೋ ಸೈಕ್ಲೋನ್ ದೆಸೆಯಿಂದ ರಾಜ್ಯದಲ್ಲಿ ಮಳೆಯಾಗಿತ್ತು. ಆದರೆ ಈ ವಾರ ಮಳೆ ಸಾಧ್ಯತೆ ಕಡಿಮೆ. ಆದರೆ ಮೋಡ ಕವಿದ ವಾತಾವರಣ ಮತ್ತು ವಿಪರೀತ ಚಳಿಯ ಸೂಚನೆಯಿದೆ. ಇಂದೂ ಬಹುತೇಕ ಜಿಲ್ಲೆಗಳಲ್ಲಿ ವಿಪರೀತ ಚಳಿಯಿರಲಿದೆ.
ಚಿಕ್ಕಮಗಳೂರು, ಕೊಡಗಿ, ಹಾಸನ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಗದಗ, ಬೀದರ್, ನಲ್ಲಿ ಇಂದು ಕನಿಷ್ಠ ತಾಪಮಾನ 14 ರಿಂದ 13 ಡಿಗ್ರಿಯಷ್ಟಾಗಲಿದೆ. ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ಹಾವೇರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ವಿಜಯಪುರ, ಯಾದಗಿರಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15 ರಿಂದ 17 ಡಿಗ್ರಿಯಷ್ಟಿರಲಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ದಾಖಲಾಗುವ ಸಾಧ್ಯತೆಯಿದೆ. ವಾರಂತ್ಯವಾಗುತ್ತಿದ್ದಂತೇ ತಾಪಮಾನದಲ್ಲಿ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.