Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿರುವುದನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಗೆ ಆಭೂತಪೂರ್ವ ಬೆಂಬಲ ಸಿಕ್ಕಿತ್ತು. ಬಂದ್ ಯಶಸ್ವಿಯಾದ ಬೆನ್ನಲ್ಲೆ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‌ಗೆ ಸಿದ್ದತೆ ನಡೆಸಿವೆ. ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೊರ್ಟ್ ಹಾಗೂ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಮಾಡಿರುವ ಆದೇಶವನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಸೆ.29ರಂದು ರಾಜ್ಯ ಬಂದ್‌ಗೆ ಕರೆ ನೀಡಿವೆ. ಸೆ.29ರಂದು ಕರ್ನಾಟಕ ಬಂದ್ ಮಾಡಿ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಬೇಕು ಹಾಗೂ ಬಂದ್ ವೇಳೆ ಕಾವೇರಿ ವಿಚಾರವಷ್ಟೇ ಅಲ್ಲದೆ ಮಹದಾಯಿ ಮತ್ತು ಮೇಕೆದಾಟು ವಿಚಾರದ ಬಗ್ಗೆಯೂ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.