Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

KAS ಅಧಿಕಾರಿ ವರ್ಷಾ ಒಡೆಯರ್‌ ಬಂಧನ

KAS ಅಧಿಕಾರಿ ವರ್ಷಾ ಒಡೆಯರ್‌ ಬಂಧನ
bangalore , ಬುಧವಾರ, 16 ನವೆಂಬರ್ 2022 (17:43 IST)
ಜಮೀನಿನ ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್​ಕುಮಾರ್‌ ಎಂಬುವವರಿಂದ 2 ಎಕರೆ ಜಮೀನು ಖರೀದಿಸಿದ್ದರು. ಆದರೆ, ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಹಣಿಯಲ್ಲಿ ಲಲಿತ್‌ ಹೆಸರು ನಮೂದಿಸುವಂತೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಅ.22ರಂದು ಆದೇಶ ಹೊರಡಿಸಿತ್ತು. ಉಪ ವಿಭಾಗಾಧಿಕಾರಿ ಆದೇಶದಂತೆ ಪಹಣಿ ತಿದ್ದುಪಡಿಗೆ ಕಾಂತರಾಜು ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ ₹ 5 ಲಕ್ಷದಂತೆ  ₹ 10 ಲಕ್ಷ ಲಂಚ ನೀಡುವಂತೆ ವಿಶೇಷ ತಹಶೀಲ್ದಾರ್‌ ಮಧ್ಯವರ್ತಿ ರಮೇಶ್‌ ಮೂಲಕ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ‘ಮಂಗಳವಾರ ಸಂಜೆ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಸೂಚಿಸಿದ್ದರು. ಅಲ್ಲಿಗೆ ತೆರಳಿದ ಕಾಂತರಾಜು ₹5 ಲಕ್ಷ ನೀಡಿದರು. ತಕ್ಷಣ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್‌ ಅವರನ್ನು ಬಂಧಿಸಿದರು. ‘ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್‌ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ’ ಎಂದು ಮಧ್ಯವರ್ತಿ ತನಿಖಾ ತಂಡಕ್ಕೆ ಉತ್ತರಿಸಿದರು. ಅಲ್ಲಿಂದ ವಾಪಸ್‌ ವಿಶೇಷ ತಹಶೀಲ್ದಾರ್‌ ಕಚೇರಿಗೆ ಬಂದ ರಮೇಶ್‌, ‘ಮೇಡಂ ವ್ಯವಹಾರ ಮುಗಿದಿದೆ’ ಎಂದರು. ‘ಹಣ ಕೊಡು’ ಎಂದು ವರ್ಷಾ ₹5 ಲಕ್ಷ ಪಡೆದುಕೊಂಡರು’ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಲವಂತವಾಗಿ ಮತಾಂತರ ಆರೋಪ ಮದನ್ ಬುರಡಿ ವಿರುದ್ಧ ದೂರು