Publish Date: Sun, 25 Jun 2023 (06:13 IST)
Updated Date: Sun, 25 Jun 2023 (10:14 IST)
ಬಳ್ಳಾರಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆರಾಜೀನಾಮೆ ನೀಡಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.