Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಾವೇರಿ ವಿವಾದ: ನಾರಿಮನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ವಿವಾದ: ನಾರಿಮನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ
ನವದೆಹಲಿ , ಶನಿವಾರ, 3 ಸೆಪ್ಟಂಬರ್ 2016 (14:47 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ವಿವಾದ ಕುರಿತಂತೆ ರಾಜ್ಯದ ಪರ ವಾದಿಸುತ್ತಿರುವ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ನಾರಿಮನ್ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
 
ನಿನ್ನೆ ಸುಪ್ರೀಂಕೋರ್ಟ್ ನೀವು ಬದುಕಿ ಇತರರು ಬದುಕಲು ಬಿಟ್ಟು ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಪ್ರಯತ್ನಿಸಿ ಎಂದು ಸಲಹೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ನಾರಿಮನ್ ಅವರನ್ನು ಭೇಟಿ ಮಾಡಿದ್ದಾರೆ.
 
ಸುಪ್ರೀಂಕೋರ್ಟ್ ಎಷ್ಟು ಟಿಎಂಸಿ ನೀರು ಹರಿಸಬೇಕು ಎಂದು ಆದೇಶ ನೀಡಿಲ್ಲವಾದ್ದರಿಂದ ಎಷ್ಟು ನೀರು ಹರಿಸಬೇಕು. ಮುಂದಿನ ವಿಚಾರಣೆ ಸಂದರ್ಭದಲ್ಲಿ ಯಾವ ರೀತಿ ವಾದ ಮಂಡಿಸಬೇಕು ಎನ್ನುವ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಇತರ ಸಚಿವರು ಉಪಸ್ಥಿತರಿದ್ದರು ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ಸಿಎಂ ಜಯಲಲಿತಾ ಜಗಳಗಂಟಿ: ವಾಟಾಳ್ ನಾಗರಾಜ್