ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.
ನಾಳೆ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ ಕಾವೇರಿ ವಿವಾದ ಕುರಿತಂತೆ ಕರ್ನಾಟಕ ಪರ ವಕೀಲರೊಂದಿಗೆ ಚರ್ಚೆ ನಡೆಸಲಿದ್ದು, ನಾಡಿದ್ದು, ಪ್ರಧಾನಿ ಮೋದಿಯವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಸಂಜೆ 7 ಗಂಟೆಗೆ ಪ್ರಧಾನಿ ಮೋದಿಯನ್ನು ಭೇಟಿ ಮಾಡಲಿರುವ ಮೋದಿ, ಉಭಯ ರಾಜ್ಯಗಳ ನೀರಿನ ಸಮಸ್ಯೆ ಬಗೆಹರಿಸಲು ಮಧ್ಯ ಪ್ರವೇಶ ಮಾಡುವಂತೆ ಮನವಿ ಮಾಡಲಿದ್ದಾರೆ.
ಮಂಡ್ಯ ರೈತರ ಬೆಳೆಗೆ ಮತ್ತು ಕುಡಿಯುವ ನೀರಿಗಾಗಿ ಮಧ್ಯಪ್ರವೇಶಿಸುವಂತೆ ಮೋದಿಯವರಿಗೆ ಎಚ್.ಡಿ.ದೇವೇಗೌಡರು ಮನವಿ ಮಾಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ