Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾವೇರಿ ನೀರು ಬಿಡುಗಡೆ ವಿರೋಧಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದಲ್ಲಿ ಕುಡಿಕೆಯಲ್ಲಿ ನೀರು ತುಂಬಿಕೊಂಡು ವಿನೂತನವಾಗಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ.. ಕುಡಿಕೆ ನೀರು ಕರ್ನಾಟಕಕ್ಕೆ, ಕ್ಯೂಸೆಕ್ ನೀರು ತಮಿಳುನಾಡಿಗೆ ಎಂದು ಪ್ರತಿಭನಾಕಾರರು ಆಕ್ರೋಶ ಹೊರಹಾಕಿದ್ದಾರೆ.. ಕೇಂದ್ರ, ರಾಜ್ಯ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರವಿಗೂ ಕುಡಿಕೆ ಹಿಡಿದು ಪ್ರತಿಭಟನಾ ಮೆರವಣಿಗೆ ಸಾಗ್ತು.. ರಾಷ್ಟ್ರೀಯ ಹೆದ್ದಾರಿಯ ಭುವನೇಶ್ವರಿ ವೃತ್ತದ ಬಳಿ ಕೆಲಕಾಲ ಕಾರ್ಯಕರ್ತರು ಧರಣಿ ನಡೆಸಿದರು.