ಕಾವೇರಿ ಗಲಭೆಗೆ ವಿರೋಧ ಪಕ್ಷದ ಕುತಂತ್ರವೇ ಕಾರಣ ಎಂದು ಕಾಂಗ್ರೆಸ್ ಮುಖಂಡ ರಾಜ್ಯಸಭೆ ಸದಸ್ಯ ಬಿ.ಕೆ.ಹರಿಪ್ರಸಾದ್ ಗಂಭೀರವಾಗಿ ಆರೋಪಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ಯಾವುದೇ ತರಹದ ತಪ್ಪು ನಡೆದಿಲ್ಲ. ಕಾವೇರಿಗಾಗಿ ರಾಜ್ಯದಲ್ಲಿ ನಡೆದಿರುವ ಗಲಭೆಗೆ ವಿರೋಧ ಪಕ್ಷವೇ ನೇರ ಹೊಣೆ ಎಂದು ಕಿಡಿಕಾರಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಉಭಯ ರಾಜ್ಯಗಳ ಸಮಸ್ಯೆಯನ್ನು ಇತ್ಯರ್ಥ್ಯಗೊಳಿಸಲಿ ಎಂದು ಕಾಂಗ್ರೆಸ್ ಮುಖಂಡ ವಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಆದರೆ, ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಸಾಧ್ಯವಿಲ್ಲ. ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಿಲಿ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಕಾವೇರಿ ವಿವಾದ ಕೋರ್ಟ್‌ನಲ್ಲಿರುವುದರಿಂದ ಪ್ರಧಾನಿ ಅವರು ಮಧ್ಯ ಪ್ರವೇಶಿಸುವುದರಿಂದ ಪ್ರಯೋಜನೆಯಾಗುವುದಿಲ್ಲ. ಮೋದಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸುವುದರ ಹಿಂದೆ ರಾಜಕೀಯ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ