ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಕೆಲವೇ ಹೊತ್ತಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಹೊರಬಂದರು.
ಅಬಕಾರಿ ನೀತಿ ಹಗರಣ ಸಂಬಂಧ ತಿಹಾರ್ ಜೈಲಿನಲ್ಲಿದ್ದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೂನ್ 2ರಂದು ಶರಣಾಗಲು ತಿಳಿಸಿದೆ.
ಇನ್ನೂ ಕೇಜ್ರಿವಾಲ್ ಅವರನ್ನು ಬರಮಾಡಿಕೊಳ್ಳಲು ಜೈಲು ಸಂಕೀರ್ಣದಲ್ಲಿ ನೆರೆದಿದ್ದ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕೇಜ್ರಿವಾಲ್ ಅವರಿಗೆ ಸ್ವಾಗತ ಕೋರಿದರು.
ತಮ್ಮ ಬೆಂಗಾವಲು ವಾಹನ ಮೂಲಕ ತಿಹಾರ್ ಜೈಲು ಆವರಣದಿಂದ ಅವರು ಹೊರ ಬಂದರು. ಪತ್ನಿ ಸುನೀತಾ ಕೇಜ್ರಿವಾಲ್, ಪುತ್ರಿ ಹರ್ಷಿತಾ ಹಾಗೂ ಎಎಪಿಯ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರ ಜೊತೆ ಇದ್ದರು.
ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲಾಗಿದೆಸ