Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!

ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!
bangalore , ಶುಕ್ರವಾರ, 8 ಅಕ್ಟೋಬರ್ 2021 (21:26 IST)
ಬೆಂಗಳೂರು; ಕೆಂಪೇಗೌಡ ಅಂತರಾಷ್ಟಿçÃಯ ವಿಮಾನ ನಿಲ್ದಾಣವೂ ಅತಿ ಹೆಚ್ಚು ಪೆರಿಷೆಬಲ್ ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
 
ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ಅವರ ಮಾಹಿತಿ ಪ್ರಕಾರ 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್‌ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂಥ (ಪೆರಿಷಬಲ್) ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ.31ರಷ್ಟು ಕೆಂಪೇಗೌಡ ವಿಮಾನ ನಿಲ್ದಾಣದಿಂದಲೇ ಹೋಗಿದೆ. 
 
ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್‌ಟನ್‌ನಷ್ಟು ಕೋಳಿ ಹಾಗೂ 1,296 ಮೆ.ಟ ಹೂವುಗಳನ್ನು ರಫ್ತು ಮಾಡಲಾಗಿದೆ.
24 ವಿಮಾನಯಾನ ಸಂಸ್ಥೆಗಳು 46 ವಿದೇಶಗಳಲ್ಲಿ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಆಂಡ್ ಡೆವಲಪ್‌ಮೆಂಟ್ ಮುಖ್ಯಾಧಿಕಾರಿ ಸಾತ್ಯಕಿ ರಘುನಾಥ್ ಹೇಳಿದ್ದಾರೆ. 
 
ಪ್ರಧಾನಿ ಅವರ ಆಶಯದಂತೆ ರೈತರ ಉತ್ಪನ್ನಗಳಿಗೆ ಆದಾಯ ಕೊಡಿಸುವ ನಿಟ್ಟಿನಲ್ಲಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಫ್ತು ಹಾಗೂ ಪಾಲುದಾರರ ಸಹಯೋಗದಲ್ಲಿ ಕೋಲ್ಡ್ ಸ್ಟೋರೇಜ್‌ನ ಇನ್ನಷ್ಟು ಮೇಲ್ದರ್ಜೆಗೇರಿಸಲು ಸಹ ಯೊಜಿಸಿದ್ದೇವೆ ಎಂದು ಎಪಿಇಡಿಎ ಅಧ್ಯಕ್ಷ  ಡಾ.ಎಂ. ಅಂಗಮುತ್ತು ತಿಳಿಸಿದ್ದಾರೆ.
cur

Share this Story:

Follow Webdunia kannada

ಮುಂದಿನ ಸುದ್ದಿ

ಅತಿಥಿ ಉಪನ್ಯಾಸಕರ ಸೇವೆ  ಮುಂದುವರಿಸಲು ನಿರ್ಧಾರ