Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನರಚನೆ ಇಂದು ಸಂಜೆ ನಡೆಯಲಿದ್ದು, ರಾಜ್ಯಕ್ಕೆ ಒಂದು ಸ್ಥಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಬುಧವಾರ ಸಂಜೆ 6 ಗಂಟೆಗೆ ಸಂಪುಟ ಪುನರಚನೆ ನಡೆಯಲಿದ್ದು, ರಾಜ್ಯಕ್ಕೆ ಮೂರು ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬಂದ ಮಾಹಿತಿ ಪ್ರಕಾರ ರಾಜ್ಯಕ್ಕೆ ಕೇವಲ ಒಂದು ಸ್ಥಾನ ಸೀಮಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಮಾತ್ರ ಸಚಿವ ಸ್ಥಾನ ನೀಡುವ ಸಾಧ್ಯತೆ ಇದ್ದು, ಉಳಿದ ಯಾರಿಗೂ ಸ್ಥಾನ ನೀಡಲಾಗುತ್ತಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ರಾಜ್ಯದ 8ರಿಂದ 10 ರಾಜ್ಯದ ಸಂಸದರಿಗೆ ಭಾರೀ ನಿರಾಸೆ ಉಂಟಾಗಿದೆ. ಲಿಂಗಾಯತರ ಕೋಟಾದಲ್ಲಿ ಸಚಿವ ಸ್ಥಾನ ನಿರೀಕ್ಷಿಸಿದ್ದ ಬಿ.ವೈ. ರಾಘವೇಂದ್ರ, ಶಿವಕುಮಾರ್ ಉದಾಸಿ, ಭಗವಂತ ಖೂಬಾಗಿಲ್ಲ ಅವರಿಗೆ ನಿರಾಸೆ ಆಗಲಿದೆ.
ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರಿದ್ದರೂ ಪ್ರಸ್ತುತ ಮೂವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದ್ದು, ಸದಾನಂದಗೌಡ, ಪ್ರಹ್ಲಾದ್ ಜೋಷಿ ಈಗಾಗಲೇ ಸಚಿವ ಸ್ಥನ ಅಲಂಕರಿಸಿದ್ದಾರೆ. ಈಗ ನಾರಾಯಣಸ್ವಾಮಿಗೆ ಮಾತ್ರ ಅವಕಾಶ ದೊರೆಯಲಿದೆ ಎಂದು ಹೇಳಲಾಗಿದೆ.