ಹುಬ್ಬಳ್ಳಿ: ಕೇರಳದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಲವ್ ಜಿಹಾದ್ ಶುರುವಾಗಿದೆ. ಕರ್ನಾಟಕದಲ್ಲೂ ಲವ್ ಜಿಹಾದ್ ಪ್ರಕರಣಗಳು ನಿರಾತಂಕವಾಗಿ ನಡೆಯುತ್ತಿವೆ. ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ಉತ್ತರ ಕೊಡುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.
ಸಂಸದ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನವರಿಗೆ ಮೊದಲೇ ಪೆನ್ಡ್ರೈವ್ ಸಿಕ್ಕಿದ್ದು, ಇದೀಗ ಪೆನ್ಡ್ರೈವ್ ಹಿಂದೆ ಬಿದ್ದಿದ್ದಾರೆ. ನಾವು ಯಾರೂ ಪ್ರಜ್ವಲ್ ರೇವಣ್ಣ ಪ್ರಕರಣ ಬೆಂಬಲಿಸಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪೈನ್ಡ್ರೈವ್ ಬಗ್ಗೆ ವಿಜಯೇಂದ್ರಗೆ ಮೊದಲೇ ಪತ್ರ ಬರೆದಿದ್ದರು ಅಂತಿದ್ದಾರೆ. ನನಗಂತೂ ಈ ಕ್ಷಣದವರೆಗೂ ನನಗೆ ಯಾವುದೇ ಪತ್ರ ಬಂದಿಲ್ಲ. ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ. ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಹೋಗಿದೆ. ಹೀಗಾಗಿ ಪೆನ್ಡ್ರೈವ್ ಹಿಂದೆ ಬಿದ್ದಿದೆ ಎಂದು ವಾಗ್ದಾಳಿ ಮಾಡಿದರು.