Publish Date: Fri, 18 Oct 2019 (20:57 IST)
Updated Date: Fri, 18 Oct 2019 (20:59 IST)
ಕೈ ಪಾಳೆಯದಲ್ಲಿ ಮುಖಂಡರ ನಡುವಿನ ಮುಸುಕಿನ ಗುದ್ದಾಟ ಇದೀಗ ಮತ್ತೆ ತಾರಕಕ್ಕೇರಿದೆ.
ಈ ಮೊದಲು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ದಿನೇಶ್ ಗುಂಡೂರಾವ್ ಅವರನ್ನು ತಕ್ಷಣವೇ ಬದಲಾಯಿಸಬೇಕು. ಹೀಗಂತ ಮಾಸ್ಟರ್ ಪ್ಲಾನ್ ರೂಪಿಸೋಕೆ ಕೆ.ಹೆಚ್.ಮುನಿಯಪ್ಪರ ಬೆಂಬಲಿಗರು ಮಹತ್ವದ ಸಭೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಭಾರೀ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.