Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಲಂಚಕ್ಕೆ ಬ್ರೇಕ್ ಹಾಕಿ ಎಂದು ಖಡಕ್ ಎಚ್ಚರಿಕೆ ನೀಡಿದ ಸಚಿವ

ಲಂಚಕ್ಕೆ ಬ್ರೇಕ್ ಹಾಕಿ ಎಂದು ಖಡಕ್ ಎಚ್ಚರಿಕೆ ನೀಡಿದ ಸಚಿವ
ಕಲಬುರಗಿ , ಬುಧವಾರ, 12 ಸೆಪ್ಟಂಬರ್ 2018 (18:29 IST)
ಸಬ್ ರಜಿಸ್ಟ್ರಾರ್, ತಹಸೀಲ್ದಾರ್, ಆರ್.ಟಿ.ಓ ಸೇರಿದಂತೆ ಇತರ ಇಲಾಖೆಗಳಲ್ಲಿ ಲಂಚದ ವ್ಯವಹಾರ ಎಲ್ಲೆ ಮೀರುತ್ತಿದೆ. ಲಂಚ ತೆಗೆದುಕೊಳ್ಳುವುದಕ್ಕೆ ಬ್ರೇಕ್ ಹಾಕದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಸಚಿವ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಖರ್ಗೆ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಸರಕಾರಕ್ಕಾಗಿ ಕೆಲಸ ಮಾಡುತ್ತಿದ್ದಾರೋ ಅಥವಾ ತಮಗೆ ಬೇಕಾದ ಜನರಿಗಾಗಿ ಕೆಲಸ ಮಾಡುತ್ತಿದ್ದಾರೋ ಎನ್ನುವ ಅನುಮಾನ ಬರುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಮಗೆ ಬೇಕಾದವರಿಗೆ ನೋಂದಣಿ ಮಾಡಿಕೊಡಲಾಗುತ್ತಿದೆ. ಲಂಚದ ಬಗ್ಗೆ ದೂರುಗಳು ವ್ಯಾಪಕವಾಗಿ ಬರುತ್ತಿವೆ.

ಲಂಚಕ್ಕೆ ಬ್ರೇಕ್ ಹಾಕದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಅಧಿಕಾರಗಳಿಗೆ ಖಡಕ್ ವಾರ್ನಿಂಗ್ ನೀಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಚತುರ್ಥಿ: ರೌಡಿ ಪರೇಡ್ ನಡೆಸಿದ ಎಸ್ ಪಿ